ಬೀದರ್ : ಕಾಶಿ ಬಳಿ ಲಾರಿ ಮತ್ತು ಕ್ರೊಸರ್ ನಡುವೆ ಭೀಕರ ರಸ್ತೆ ಅಪಘಾತವಾಗಿ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ನಡೆದಿದೆ.
ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ದುರ್ಮರಣವಾಗಿದ್ದು ಒಂದೇ ಕುಟುಂಬದ ಮೂರು ಜನ ಸೇರಿದಂತೆ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾಶಿಯಿಂದ 20 ಕಿಲೋ ಮೀಟರ ದೂರದಲ್ಲಿ ಲಾರಿಗೆ ಹಿಂಬದಿಯಿಂದ ರಭಸವಾಗಿ ಕ್ರೂಸರ್ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿದ್ದು ಉಳಿದ 7 ಜನರ ಸ್ಥಿತಿ ಗಂಭೀರವಾಗಿದೆ.
57 ವರ್ಷದ ಲಕ್ಷ್ಮಿ, 62 ವರ್ಷದ ನೀಲ್ಲಮ್ಮ, 45 ವರ್ಷದ ಸಂತೋಷ, 40 ವರ್ಷದ ಸುನೀತಾ, ಕಲಾವತಿ ಸೇರಿದಂತೆ ಐದು ಜನ ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಪ್ರಯಾಗ್ ರಾಜ್ ನಿಂದ ಕಾಶಿ ಕಡೆ ಹೋಗುವಾಗ ಭೀಕರ ರಸ್ತೆ ಅಪಘಾತವಾಗಿ ಸಾವನ್ನಪ್ಪಿದ್ದಾರೆ.
ಎರಡು ದಿನಗಳ ಹಿಂದೇ ಒಂದೇ ಗಾಡಿಯಲ್ಲಿ ಕುಂಭ ಮೇಳಕ್ಕೆ ತೆರಳಿದ್ದ 13 ಜನರಲ್ಲಿ ಐದು ಜನ ಸಾವನ್ನಪ್ಪಿದು ಶವಗಳನ್ನು ಶವಗಾರಕ್ಕೆ ರವಾನಿಸಿದ್ದು, ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಿರ್ಜಾ ಮುರಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4