ವಕೀಲೆಯೊಬ್ಬರಿಗೆ ಕೋರ್ಟ್ ಆವರಣದಲ್ಲೇ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಮಂಗಳವಾರ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ನಡೆದಿದೆ.
ಗಾಯಾಳು ವಕೀಲೆ ವಿಮಲಾ ಅವರ ಪರಿಸ್ಥಿತಿ ಗಂಭೀರವಾಗಿದೆ. ಕೃತ್ಯವೆಸಗಿದ ಆರೋಪಿ ಜಯರಾಮ ರೆಡ್ಡಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಕೀಲೆ ವಿಮಲಾ ಅವರಿಗೆ ಪರಿಚಯಸ್ಥನಾದ ಜಯರಾಮ ಹಂತ ಹಂತವಾಗಿ ಸುಮಾರು ಒಂದೂವರೆ ಕೋಟಿ ರೂ.ಗಿಂತಲೂ ಹೆಚ್ಚು ಹಣ ನೀಡಿದ್ದ. ಇತ್ತೀಚೆಗೆ ಇವರಿಬ್ಬರಿಗೂ ಮನಸ್ತಾಪ ಉಂಟಾಗಿತ್ತು. ಹೆಜ್ಜಾಲ ಬಳಿ ಇರುವ ಪ್ರಾಪರ್ಟಿ ವಿಚಾರವಾಗಿ ಇಬ್ಬರು ಕಿರಿಕ್ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಿಮಲಾ ದೌರ್ಜನ್ಯದ ಜತೆಗೆ ಪ್ರಾಪರ್ಟಿ ವಿಚಾರವಾಗಿಯೂ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣ ಸಂಬಂಧ ಇಬ್ಬರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಏಕಾಏಕಿ ಕೋರ್ಟ್ ಹಾಲ್‌ನ ಒಂದನೇ ಎಸಿಎಂಎಂ ಬಳಿ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವಿಮಲಾ ಅವರನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಲಸೂರುಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


