ಬೆಳಗಾವಿ: ತಂದೆ ಮಗ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ.
ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿಯಾಗಿದ್ದು, ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ. ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ ಧರೆಪ್ಪ ಮತ್ತೋರ್ವ ಬಾಲಕ ಬಾಗಪ್ಪ ಸಣ್ಣಕ್ಕಿಯನ್ನು ರಕ್ಷಣೆ ಮಾಡಲು ಬಸವರಾಜ್ ಧಾವಿಸಿದ್ದ. ಈ ವೇಳೆ ಕೃಷಿ ಹೊಂಡದಲ್ಲಿ ಮುಳುಗಿ ಬಸವರಾಜ್ ಮತ್ತು ಧರೆಪ್ಪ ಸಾವನ್ನಪ್ಪಿದ್ದಾರೆ.
ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಬಾಗಪ್ಪನ ರಕ್ಷಣೆ ಮಾಡಿದ್ದಾರೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC