ತುಮಕೂರಿನ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತುಮಕೂರು ಕಚೇರಿಯಲ್ಲಿ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿ ಗಾಂಧೀಜಿ ಅವರ ಚಿಂತನೆ, ಆದರ್ಶ, ಜೀವನ ಮೌಲ್ಯಗಳನ್ನು ಸ್ಮರಿಸುವ ಮತ್ತು ಅದರಂತೆ ನಡೆಯುವ ಪಣ ತೊಡುವ ದಿನವಿದು. ಗಾಂಧೀಜಿಯವರು ತಮ್ಮ ಸತ್ಯ, ಅಹಿಂಸೆ ಸಿದ್ಧಾಂತದಿಂದಲೇ ಜಗವನ್ನು ಗೆದ್ದ ಚೇತನ. ಗಾಂಧೀಜಿಯವರ ಶಾಂತಿ ಮತ್ತು ಅಹಿಂಸ ತತ್ವವನ್ನು ಗೌರವಿಸುವ ಸಲುವಾಗಿ ಈ ದಿನವನ್ನು ಜಗತ್ತಿನಾದ್ಯಂತ ಅಂತರಾಷ್ಟ್ರೀಯ ಅಹಿಂಸಾ ದಿನವನ್ನಾಗಿಯೂ ಆಚರಣೆ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳಾದ ತಬ್ರೇಜ್ ಖಾನ್ , ನರಸಿಂಹರಾಜು, ಲಕ್ಷ್ಮಿಕಾಂತರವರು ಮತ್ತು ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ.ಸುರೇಶ್.ಸಿ. ರವರು ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296