ತುಮಕೂರು: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿ, ಪ್ರಾಣಾಪಾಯಕ್ಕೆ ಕಾರಣರಾದ ತಂದೆಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
2024ರಲ್ಲಿ ಗುಬ್ಬಿ ಪಟ್ಟಣದಲ್ಲಿ ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ತನಿಖೆಯ ವೇಳೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದವರು ಅಪ್ರಾಪ್ತರೆಂದು ತಿಳಿದುಬಂದಿತ್ತು. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.
ನ್ಯಾಯಾಲಯದ ತೀರ್ಪು:
ಪ್ರಕರಣದ ವಿಚಾರಣೆ ನಡೆಸಿದ ಗುಬ್ಬಿ ನ್ಯಾಯಾಧೀಶರಾದ ಅನುಪಮಾ ಡಿ. ಅವರು, ಮಗನಿಗೆ ವಾಹನ ನೀಡಿದ ತಂದೆ ನಾಗೇಂದ್ರಕುಮಾರ್ ಅವರಿಗೆ 25 ಸಾವಿರ ರೂ. ದಂಡ ಹಾಗೂ ಒಂದು ದಿನದ ಜೈಲು ಶಿಕ್ಷೆ ವಿಧಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಕೀಲರಾದ ಅಕ್ಷತಾ ವಿಶ್ವನಾಥ್ ವಾದ ಮಂಡಿಸಿದ್ದರು.
ಈ ಒಂದು ತೀರ್ಪು ವಾಹನ ಮಾಲೀಕರಿಗೆ ಹಾಗೂ ಪೋಷಕರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಅಪ್ರಾಪ್ತರಿಗೆ ವಾಹನ ನೀಡುವುದು ಕಾನೂನುಬಾಹಿರ ಹಾಗೂ ಅಪಾಯಕಾರಿ ಎಂಬ ಅಂಶವನ್ನು ಎತ್ತಿ ತೋರಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


