nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    ತುಮಕೂರು February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    By adminFebruary 12, 2026No Comments2 Mins Read
    senior citizen

    ತುಮಕೂರು: 2.4 ಎಕರೆ ಜಮೀನನ್ನು ತಂದೆಯಿಂದ ತಮ್ಮ ಹೆಸರಿಗೆ ಬರೆಯಿಸಿ ಕೊಂಡು ನಂತರ ತಂದೆ ತಾಯಿಯನ್ನು ಆರೈಕೆ ಮಾಡದೇ, ಅಮಾನವೀಯತೆ ಮೆರೆದಿದ್ದ ಪುತ್ರಿಯರಿಗೆ ಇದೀಗ ಪೋಷಕರು ಕಾನೂನಿನ ಮೂಲಕ ಬಿಸಿಮುಟ್ಟಿಸಿದ್ದು, ಇದೀಗ ಪೋಷಕರು ನೀಡಿದ್ದ  ಗಿಫ್ಟ್ ಡೀಡ್ ಆಸ್ತಿಯನ್ನು ಹೈಕೋರ್ಟ್ ಪೋಷಕರಿಗೆ ಮರಳಿಸಿದೆ.

    2.4 ಎಕರೆ ಜಮೀನನ್ನು  ಇಬ್ಬರು ಪುತ್ರಿಯರು ತಮ್ಮ ಹೆಸರಿಗೆ ಬರೆದ ನಂತರ ತಮ್ಮನ್ನು ನಿರ್ಲಕ್ಷಿಸಿರುವ ಬಗ್ಗೆ ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ವೆಂಕಟಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕ ಸದಸ್ಯ ಪೀಠ 2007ರ ಹಿರಿಯ ನಾಗರಿಕರ ಮತ್ತು ಪೋಷಕರ ನಿರ್ವಹಣೆ ಹಾಗೂ ಕಲ್ಯಾಣ ಕಾಯ್ದೆಯನ್ನು ಅನ್ವಯಿಸಿ, ಕೃಷಿ ಭೂಮಿಯನ್ನು ಪುತ್ರಿಯರ ಹೆಸರಿಗೆ ಮಾಡಿಕೊಟ್ಟಿದ್ದ ಗಿಫ್ಟ್ ಡೀಡ್‌ ನ್ನು ರದ್ದುಗೊಳಿಸಿದೆ. ಜೊತೆಗೆ ಹಿರಿಯ ನಾಗರಿಕರಿಗೆ ಅವರ ವೃದ್ಧಾಪ್ಯದಲ್ಲಿ ಆರೈಕೆ ಮಾಡದೆ, ಅವರ ಜೀವನ ನಿರ್ವಹಣೆಗೆ ನೆರವಾಗದೆ ಇದ್ದರೆ ಅಂತಹ ಸಂದರ್ಭದಲ್ಲಿ ನ್ಯಾಯಾಲಯ ಅವರ ರಕ್ಷಣೆಗೆ ಧಾವಿಸಿ ಅವರ ಆಸ್ತಿಯನ್ನು ರಕ್ಷಿಸಿ, ಅವರ ಹಕ್ಕುಗಳನ್ನು ಮರಳಿ ದೊರಕಿಸಿಕೊಡಲಿದೆ ಎಂದು ಹೇಳಿದೆ.

    ಪ್ರಕರಣವು ನ್ಯಾಯಮಂಡಳಿ, ಜಿಲ್ಲಾಧಿಕಾರಿಗಳ ವಿಚಾರಣೆ ಹಂತದಲ್ಲಿದ್ದಾಗ ಅಧಿಕಾರಿಗಳು ಅಳವಡಿಸಿಕೊಂಡ ವ್ಯಾಖ್ಯಾನವನ್ನು ಹೈಕೋರ್ಟ್ ಒಪ್ಪಿಲ್ಲ. ಗಿಫ್ಟ್ ಡೀಡ್ ಎಂಬುದು ಸ್ಪಷ್ಟವಾದ ನಿರ್ವಹಣಾ ಷರತ್ತು ಕಾಯ್ದೆಯ ಸೆಕ್ಷನ್ 23(1) ರಡಿಯಲ್ಲಿ ಕಡ್ಡಾಯ ಅವಶ್ಯಕತೆಯಿಲ್ಲ. ಒಂದು ವೇಳೆ ಇಂತಹ ಪ್ರಕರಣ ಎದುರಾದರೆ, ಅವುಗಳ ಸಂಗತಿ, ಸಂದರ್ಭ ಮತ್ತು ನಡವಳಿಕೆಯಿಂದ ಊಹಿಸಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

    ಉಪ ವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ನೀಡಿರುವ ಕಾರಣಗಳು ಕಾನೂನುಬದ್ಧವಾಗಿ ದೋಷಪೂರಿತ ಮತ್ತು ಕಾಯ್ದೆಯ ತಪ್ಪು ತಿಳುವಳಿಕೆ ಆಧರಿಸಿವೆ ಎಂದು ಹೇಳಿರುವ ನ್ಯಾಯಾಲಯ, ಇದು ವಯಸ್ಸಾದ ಪೋಷಕರು ಮತ್ತು ಮಕ್ಕಳಿಗೆ ಆಸ್ತಿಯನ್ನು ವರ್ಗಾಯಿಸುವಾಗ ಕಟ್ಟುನಿಟ್ಟಾದ ಕಾನೂನು ವಿಧಿವಿಧಾನಗಳಿಗಿಂತ ಹೆಚ್ಚಾಗಿ ನಂಬಿಕೆ, ನೈತಿಕ ಭರವಸೆ ಮತ್ತು ಕೌಟುಂಬಿಕ ಬಂಧವನ್ನು ಅವಲಂಬಿಸಿರುತ್ತದೆ ಎಂದು ಹೇಳಿದೆ.

    ವೆಂಕಟಯ್ಯನವರ ವೃದ್ಧಾಪ್ಯ, ಗ್ರಾಮೀಣ ಹಿನ್ನೆಲೆ, ನಿಕಟ ಕುಟುಂಬ ಸಂಬಂಧ ಮತ್ತು ಆಸ್ತಿ ವರ್ಗಾವಣೆ ಬಳಿಕ ನಿರ್ಲಕ್ಷ್ಯವನ್ನು ಗಮನಿಸಿದ ನ್ಯಾಯಾಲಯವು ಈ ತೀರ್ಪು ನೀಡಿದೆ.

    ಏನಿದು ಘಟನೆ?

    ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿಯ ದೊಡ್ಡಗೊಲ್ಲಹಳ್ಳಿಯ ವೆಂಕಟಯ್ಯ ಸುಮಾರು 2.4 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದರು. ಅವರು ತಮ್ಮ ಪುತ್ರಿಯರು ತನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆಂದು ಭರವಸೆ ನೀಡಿದ ಬಳಿಕ ಪುತ್ರಿಯರಾದ ಶಿವಮ್ಮ ಮತ್ತು ಪುಟ್ಟಮ್ಮ ಅವರ ಪರವಾಗಿ ಉಡುಗೊರೆ ಪತ್ರವನ್ನು ಮಾಡಿಕೊಟ್ಟು ಆಸ್ತಿಯನ್ನು ವರ್ಗಾವಣೆ ಮಾಡಿದ್ದರು.

    ಬಳಿಕ ಪುತ್ರಿಯರು ತಮ್ಮನ್ನು ನೋಡಿಕೊಳ್ಳಲು ವಿಫಲರಾಗಿದ್ದಾರೆಂದು ಅವರು ಆರೋಪಿಸಿದ್ದರು. ಅಲ್ಲದೆ, ಹಿರಿಯ ನಾಗರಿಕರ ಕಾಯ್ದೆಯಡಿ, ತಮ್ಮ ಗಿಫ್ಟ್ ಡೀಡ್ ರದ್ದು ಕೋರಿ ಅವರು ಉಪ ವಿಭಾಗಾಧಿಕಾರಿ ನೇತೃತ್ವದ ನ್ಯಾಯಮಂಡಳಿ ಮುಂದೆ ಮನವಿ ಸಲ್ಲಿಸಿದ್ದರು.

    ನ್ಯಾಯಮಂಡಳಿಯು 2023 ಡಿ.19 ರಂದು ಅವರ ದೂರನ್ನು ವಜಾಗೊಳಿಸಿತು. ಉಡುಗೊರೆ ಪತ್ರದಲ್ಲಿ ಹೆಣ್ಣು ಮಕ್ಕಳು ತಮ್ಮನ್ನು ನೋಡಿಕೊಳ್ಳಲು ನಿಬಂಧನೆಯನ್ನು ಹೊಂದಿರುವ ಸ್ಪಷ್ಟ ಷರತ್ತು ಇಲ್ಲ ಎಂದು ತೀರ್ಪು ನೀಡಿತು. 2024ರ ಆ.22 ರಂದು ಜಿಲ್ಲಾಧಿಕಾರಿ ಕೂಡ ಅದೇ ಆದೇಶವನ್ನು ಎತ್ತಿ ಹಿಡಿದಿದ್ದರು.

    ಹಾಗಾಗಿ ಗಿಫ್ಟ್ ಡೀಡ್ ರದ್ದು ಕೋರಿ ಹೈಕೋರ್ಟ್ ಗೆ ಮೊರೆ ಹೋಗಿದ್ದ ವೆಂಕಟಯ್ಯ, ತಾವು ಅನಕ್ಷರಸ್ಥರು ಮತ್ತು ಗಿಫ್ಟ್ ಡೀಡ್ ಬಗ್ಗೆ ತಿಳಿದಿಲ್ಲದ ಕಾರಣ ಪುತ್ರಿಯರಾದ ಶಿವಮ್ಮ ಮತ್ತು ಪುಟ್ಟಮ್ಮ ಅವರುಗಳು ಉಡುಗೊರೆ ಪತ್ರ ಸಿದ್ಧಪಡಿಸಿದ್ದರು. ತನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂಬ ಭರವಸೆಯ ಮೇರೆಗೆ ಗಿಫ್ಟ್ ಡೀಡ್ ಮಾಡಿಕೊಟ್ಟಿದ್ದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.