ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಿಜೆಪಿ—ಜೆಡಿಎಸ್ ಗೆ ಆಘಾತವನ್ನುಂಟು ಮಾಡಿದೆ. ಈ ನಡುವೆ ಕಾಂಗ್ರೆಸ್ ಗೆಲುವಿನ ಸಂಭ್ರಮದಲ್ಲಿದೆ. ಇದೇ ವೇಳೆ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ಗಮನ ಸೆಳೆದಿದೆ.
ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿಯೂ ಗೆಲುವು ನೀಡಿದ್ದಕ್ಕೆ ಕಾಂಗ್ರೆಸ್ ಸಂತಸದಲ್ಲಿ ತೇಲಾಡಿದೆ. “ಅಭಿವೃದ್ಧಿಗೆ ಒಲವು, ಗ್ಯಾರೆಂಟಿಗೆ ಗೆಲುವು” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ವಿಪಕ್ಷಗಳಿಗೆ ತಿರುಗೇಟು ನೀಡಿದೆ.
ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದರೆ, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಹಾಗೂ ಶಿಗ್ಗಾಂವಿಯಲ್ಲೂ ಯಾಸಿರ್ ಖಾನ್ ಪಠಾಣ್ ಗೆಲುವಿನ ನಗೆ ಬೀರಿದ್ದಾರೆ.
ಫಲಿತಾಂಶಕ್ಕೂ ಮುನ್ನ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿಎಂ, ಡಿಸಿಎಂ ಸೇರಿದಂತೆ ಅನೇಕ ‘ಕೈ’ ನಾಯಕರು ಭವಿಷ್ಯ ನುಡಿದಿದ್ದರು. ಅದರಂತೆ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q