ತುರುವೇಕೆರೆ: ತಾಲೂಕಿನ ಕಣಕೂರಿನಲ್ಲಿ ಫೆ.6ರಂದು ನಡೆಯಲಿರುವ ಟಿ.ಟಿ.ಡಿ. ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಕಲ್ಯಾಣೋತ್ಸವದ ರೂಪರೇಷೆ ಕುರಿತು ತಾಲೂಕು ದಂಡಾಧಿಕಾರಿ ಕುಂಞಿ ಅಹಮದ್ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಕಾರ್ಯಕ್ರಮ ಸುಗಮವಾಗಿ ನಡೆಯಲು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಆಯಾ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಶ್ರೀ ಬಾಲಾಜಿ ಸೇವಾ ಟ್ರಸ್ಟ್ (ರಿ) ಸಂಸ್ಥಾಪಕ ಅಧ್ಯಕ್ಷ ಬಾಲಾಜಿ ಕೆ. ಕುಮಾರ್, ತಾಲೂಕು ಪಂಚಾಯಿತಿ ಇ.ಓ. ಅನಂತರಾಜು, ಸರ್ಕಲ್ ಇನ್ಸ್‌ಪೆಕ್ಟರ್ ಲೋಹಿತ್, ಡಿ.ಹೆಚ್.ಓ ಡಾ. ರಂಗನಾಥ್, ಅಗ್ನಿಶಾಮಕ ಅಧಿಕಾರಿ ಶ್ರೀನಿವಾಸ್, ಬೆಸ್ಕಾಂ ಎ.ಇ.ಇ ರಾಜಶೇಖರ್, ಪಿಡಬ್ಲ್ಯೂಡಿ ಅಧಿಕಾರಿ ನೂರೂಲ್ಲ, ಕುಡಿಯುವ ನೀರು ಸರಬರಾಜು ಇಲಾಖೆ ಅಬ್ದುಲ್ ಅಶಾಮ್, ರೈತ ಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್, ಸಚಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


