ಹೊಸದುರ್ಗ : ಫೆಬ್ರವರಿಯಲ್ಲಿ ಮತ್ತೆ 2,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಹೊಸದುರ್ಗ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ಮುಂಬರುವ ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಇನ್ನು ಈ ವರ್ಷವೂ 100 ಪದವಿ ಪೂರ್ವ ಕಾಲೇಜು ಹಾಗೂ 100 ಪ್ರೌಢಶಾಲೆಗಳನ್ನು ಕೊಟ್ಟಿದ್ದೇವೆ. ಎಲ್ಲಿ ಶಾಲೆ ಹಾಗೂ ಕಾಲೇಜು ಅವಶ್ಯಕತೆ ಇದೆಯೋ ಅಲ್ಲಿ ನೂತನವಾಗಿ ಆರಂಭವಿಸಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


