ಚೆನ್ನೈ: ಉದ್ದೇಶಿತ ಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದಿಂದ ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.
ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆದಿದ್ದ ಲೋಕಸಭಾ ಕ್ಷೇತ್ರಗಳ ವಿಂಗಡಣೆಯ ಕುರಿತ ಜಂಟಿ ಕ್ರಿಯಾ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡಿದರೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಲಿದೆ. ಕ್ಷೇತ್ರ ಪುನರ್ ವಿಂಗಡಣೆಯು, ಜನಸಂಖ್ಯೆಯನ್ನು ನಿಯಂತ್ರಿಸಿದ, ಸಾಕ್ಷರತೆಯನ್ನು ಸುಧಾರಿಸಲು ಮತ್ತು ಮಹಿಳೆಯರ ಸಬಲೀಕರಣಕ್ಕೆ ಯತ್ನಿಸಿದ ದಕ್ಷಿಣ ಭಾರತದ ರಾಜ್ಯಗಳ ಮೇಲಿನ ರಾಜಕೀಯ ದಾಳಿ ಎಂದು ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಇತರ ದಕ್ಷಿಣ ರಾಜ್ಯಗಳು ಭಾರತದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ನಾವು ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ಆದರೂ, ಕೇಂದ್ರವು ಈಗ ನಮ್ಮ ಸಂಸದೀಯ ಪ್ರಾತಿನಿಧ್ಯವನ್ನು ಕಡಿಮೆ ಮಾಡಲು ಯೋಜಿಸುತ್ತಿದೆ. ಸಂಸತ್ತಿನಲ್ಲಿ ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4