ಜೈಪುರ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ಶಸ್ತ್ರ ಚಿಕಿತ್ಸೆಯ ಬಳಿಕ ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ರಾಜಸ್ಥಾನದ ರಾಜ್ಯ ಆಡಳಿತ ಸೇವೆಯ ಮಹಿಳಾ ಅಧಿಕಾರಿ ಪ್ರಿಯಾಂಕಾ ಬಿಷ್ಣೋಯ್ (35) ಮೃತಪಟ್ಟವರಾಗಿದ್ದಾರೆ. ಇವರು ಹೊಟ್ಟೆ ನೋವಿನ ಹಿನ್ನೆಲೆ ಜೋಧಪುರದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು
ಶಸ್ತ್ರಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಇನ್ನಷ್ಟು ಏರುಪೇರಾಗಿತ್ತು. ಬುಧವಾರ ಅವರನ್ನು ಅಹಮದಾಬಾದ್ ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪ್ರಿಯಾಂಕಾ ಕೊನೆಯುಸಿರೆಳೆದಿದ್ದಾರೆ.
ಇದರಿಂದ ರೊಚ್ಚಿಗೆದ್ದ ಪ್ರಿಯಾಂಕಾ ಕುಟುಂಬದವರು ಏಮ್ಸ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸದ್ಯ ಪ್ರತಿಭಟನೆಯನ್ನು ಕೈಬಿಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q