ರಾಯಚೂರು: ಮಹಿಳಾ ಅರ್ಚಕಿಯೊಬ್ಬರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಡೊಂಗರಾಂಪೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುಳಾ (42) ಸಾವಿಗೆ ಶರಣಾದವರು ಎಂದು ಗುರುತಿಸಲಾಗಿದೆ.
ಇವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ಜೀವನದಲ್ಲಿ ಮಾನಸಿಕವಾಗಿ ನೊಂದು ಸಾವಿಗೆ ಶರಣಾಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ.
ಇನ್ನೂ ಅರ್ಚಕಿಯ ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.
ಘಟನೆ ಸಂಬಂಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296