ಹರ್ಯಾಣ: 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು ಪ್ರೊಫೆಸರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.
ಈ ಕುರಿತು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಪತ್ರ ಬರೆದಿದ್ದಾರೆ . ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಪತ್ರದ ಪ್ರತಿಯನ್ನು ಉಪಕುಲಪತಿ ಅಜ್ಮೀರ್ ಸಿಂಗ್ ಮಲಿಕ್, ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯ ಗೃಹ ಸಚಿವ ಅನಿಲ್ ವಿಜ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮತ್ತು ಇತರರಿಗೆ ಕಳುಹಿಸಲಾಗಿದೆ. ಆದರೆ, ಈ ಬಗ್ಗೆ ಸರಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಪ್ರೊಫೆಸರ್ ತಮ್ಮ ಚೇಂಬರ್ ಗೆ ಕರೆಸಿಕೊಂಡು, ಬಳಿಕ ಬಾತ್ ರೂಮ್ ಗೆ ಕರೆದೊಯ್ದು, ಖಾಸಗಿ ಅಂಗಗಳನ್ನು ಮುಟ್ಟಿ ಅಶ್ಲೀಲ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.


