ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯ ಪ್ರಮಾಣದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಮಾಡಿರುವ ಇಂತಹ ಸಂದರ್ಭವನ್ನೇ ದುರುಪಯೋಗ ಮಾಡಿಕೊಂಡು ಕಾಳಸಂತೆಕೋರರು ಕೃತಕ ಅಭಾವ ಸೃಷ್ಟಿಸಿ ರೈತರ ಸಂಕಷ್ಟವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಅಲ್ಲಗಳೆಯಲಾಗದು. ಹಾಗಾಗಿ ಗೊಬ್ಬರ ಕೊರತೆ ಕಂಡುಬರುವೆಡೆ ತೀವ್ರ ನಿಗಾ ವಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಸಿಎಂ, ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುವ ಸಾಧ್ಯತೆಗಳು ಇದ್ದು, ಎಲ್ಲಾ ಜಿಲ್ಲೆಗಳಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಬೇಕಿದೆ ಎಂದಿದ್ದಾರೆ.
ಜಿಲ್ಲಾ ಕೇಂದ್ರ, ತಾಲ್ಲೂಕು, ಹೋಬಳಿ ಎಲ್ಲೂ ಕೂಡ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಟು, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


