nammatumakuru

    Subscribe to Updates

    Get the latest creative news from FooBar about art, design and business.

    What's Hot

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026
    Facebook Twitter Instagram
    ಟ್ರೆಂಡಿಂಗ್
    • 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    • ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    • ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!
    • ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
    • ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
    • ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಬ್ಬಗಳ‌ ಆಚರಣೆಗಳಿಂದಲೇ ಭಾರತ ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    Uncategorized October 4, 2024

    ಹಬ್ಬಗಳ‌ ಆಚರಣೆಗಳಿಂದಲೇ ಭಾರತ ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    By adminOctober 4, 2024No Comments2 Mins Read
    lakshmi hebbalkar

    ಬೆಳಗಾವಿ: ಭಾರತ ಹಳ್ಳಿಗಳ ದೇಶ, ಹಬ್ಬಗಳ ದೇಶ.‌ ವಿಶೇಷ ಹಬ್ಬಗಳ ಆಚರಣೆಗಳಿಂದ ಇಡೀ ವಿಶ್ವವೇ ಇಂದು ನಮ್ಮನ್ನು ಗುರುತಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ 41ನೇ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದ ಸಚಿವರು, ಭಾರತದಲ್ಲಿ ಎಲ್ಲಾ ಸಮುದಾಯಗಳು ಸೇರಿ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ನಮ್ಮ ಹಬ್ಬಗಳ ವೈಶಿಷ್ಟ್ಯ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

    ರಾಜ್ಯದ ಅತಿದೊಡ್ಡ ಹಬ್ಬ ನವರಾತ್ರಿ. ಇದು ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ. ನಮ್ಮದು ಸಾಂಸ್ಕೃತಿಕವಾಗಿ ಶ್ರೀಮಂತ ದೇಶವಾಗಿರುವುದರಿಂದ ಇಡೀ ವಿಶ್ವವೇ ಭಾರತವನ್ನು ಅನುಕರಣೆ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    ನಾವುಗಳು ಎಲ್ಲಾ ವಸ್ತುಗಳಲ್ಲಿ, ಸಂಬಂಧಗಳಲ್ಲಿ ದೇವರನ್ನು ಕಾಣುತ್ತೇವೆ. ಹಿರಿಯರಲ್ಲಿ, ಮಕ್ಕಳಲ್ಲಿ, ಮುತ್ತೈದೆಯರಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸಂಸ್ಕೃತಿ ಉಳಿಸಿ, ಬೆಳೆಸುವುದು ಪ್ರತಿ ಮನೆಯ ಗೃಹಿಣಿ, ನಮ್ಮ ಸಂಸ್ಕೃತಿಯ ರಾಯಭಾರಿಗಳು ಗೃಹಿಣಿಯರು ಎಂದು ಸಚಿವರು ಹೇಳಿದರು. ‌

    ಕಲ್ಲೋಳಿಯಲ್ಲಿ ಅತ್ಯಂತ ಪೂಜ್ಯ ಭಾವನೆಯಿಂದ ಘಟ್ಟ ಸ್ಥಾಪನೆ ಮಾಡಲಾಗಿದೆ. ಇದನ್ನು ನೋಡಿ ಮೈಸೂರು ದಸರಾ ನೋಡಿದಷ್ಟೇ ಖುಷಿ‌ ಆಗಿದೆ. ದುಷ್ಟರನ್ನು ಸಂಹಾರ ಮಾಡಿ, ಶಿಷ್ಠರನ್ನು ರಕ್ಷಣೆ ಮಾಡುವುದೇ ನವರಾತ್ರಿ ಹಬ್ಬದ ಸಂಕೇತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

    ಆ ದೇವರಲ್ಲಿ ಭಕ್ತಿಯಿಂದ ಬೇಡಿಕೊಂಡಿದ್ದು ಖಂಡಿತವಾಗಿಯೂ ಈಡೇರುತ್ತದೆ. ನಮ್ಮಲ್ಲಿರುವ ಕೆಟ್ಟ ಭಾವನೆಗಳನ್ನು ಹೊರ ಹಾಕಬೇಕು.  ದೇಶದ ಸಂಸ್ಕೃತಿಯನ್ನು ಉಳಿಸುವ ಸಲುವಾಗಿ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ಸಚಿವರು ಕರೆ ನೀಡಿದರು.

    ಈ ವರ್ಷ ಉತ್ತಮ ಮಳೆಯಾಗಿದ್ದು, ಉತ್ತಮ ಬೇಳೆಯನ್ನು ನಿರೀಕ್ಷಿಸಲಾಗಿದೆ. ಕುಡಿಯುವ ನೀರಿನ ಕೊರತೆ ಆಗುವುದಿಲ್ಲ. ಎಲ್ಲರಿಗೂ ದೇವರು ಉತ್ತಮ ಆರೋಗ್ಯ ಆಯುಷ್ಯ ವನ್ನು ಕರುಣಿಸಲಿ. ರಾಜ್ಯ ಸಮೃದ್ಧಿ ಯಿಂದ ತುಂಬಿ ತುಳುಕಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾರೈಸಿದರು.

     

    ಗಣ್ಯರಿಂದ ಪುರ್ಷ್ಪಾಚನೆ:

    ಬಂಡಿಗಣಿಯ ಬಸವಗೋಪಾಲ ನೀಲ ಮಾಣಿಕ್ಯ ಮಠದ ದಾಸೋಹ ರತ್ನ ಅನ್ನದಾನೇಶ್ವರರು, ಬಬಲಾದಿಯ ಸಿದ್ದರಾಮೇಶ್ವರ ಮಹಾಸ್ವಾಮೀಜಿ, ಅರಿಕೇರಿಯ ಅಮೋಘಸಿದ್ಧ ಪೀಠಿದ ಅವದೂತ ಮಹಾರಾಜರು, ಹುಳ್ಯಾಳದ ಜಯಶ್ರೀ ಅಮ್ಮನ್ನವರು, ಸುಕ್ಷೇತ್ರ ಭೂಕೈಲಾಸ ಮಾಲಿಂಗರಾಯ ಮಹಾರಾಜರು,  ಸಚಿವೆ  ಲಕ್ಷ್ಮಿ ಹೆಬ್ಬಾಳಕರ್, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಡಾ. ಮಹಾಂತೇಶ ಕಡಾಡಿ, ನವರಾತ್ರಿ ಉತ್ಸವ ಸ್ವಾಗತ ಸಮಿತಿ ಅಧ್ಯಕ್ಷ ರಾವಸಾಹೇಬ್ ಬೆಳಕೂಡ ಹಾಗೂ ಮತ್ತಿತರರು ಸೇರಿದಂತೆ ಆನೆಯ ಅಂಬಾರಿ ಮೇಲೆ ಉತ್ಸವ ಮೂರ್ತಿಗೆ ಮತ್ತು ನವರಾತ್ರಿ ಪ್ರತಿಷ್ಠಾಪನೆ ದುರ್ಗಾದೇವಿ ಮೂರ್ತಿಗೆ ಪುಪ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆ ನಡೆಸಲಾಯಿತು.

    ಗಮನಸೆಳೆದ ಅದ್ದೂರಿ ಮೆರವಣಿಗೆ:

    ನವರಾತ್ರಿಯ ದುರ್ಗಾದೇವಿ ಮೂರ್ತಿಯ ಮೆರವಣಿಗೆಯಲ್ಲಿ ಜಂಬೂ ಸವಾರಿಯಲ್ಲಿ ಮಹಿಳೆಯರ ಕುಂಭಮೇಳದೊಂದಿಗೆ ಡೊಳ್ಳು, ಸಂಬಾಳ, ಕರಡಿ ಮೇಳ, ಜಾಂಜಪಥಕ ಸೇರಿದಂತೆ ಹಲವಾರು ಸಂಪ್ರದಾಯಿಕ ವಾದ್ಯಗಳು ದುರ್ಗಾದೇವಿ ವೈಭವದ ಉತ್ಸವಕ್ಕೆ ಮೆರಗು ನೀಡಿದವು.

    ಈ ಸಂದರ್ಭದಲ್ಲಿ ಮುಖಂಡರಾದ ಲಕ್ಕಣ್ಣ ಸವಸುದ್ದಿ, ಬಸವರಾಜ ಬೆಳಕೂಡ, ಬಸವರಾಜ ಕಡಾಡಿ, ರಾಮಪ್ಪ ಬೆಳಕೂಡ, ಉಮೇಶ ಬಿ.ಪಾಟೀಲ, ಸಿದ್ದಪ್ಪ ಮುಗಳಿ, ಗಿರಿಮಲ್ಲಪ್ಪ ಸವಸುದ್ದಿ, ಭೀಮರಾಯ ಕಡಾಡಿ, ಶಿವಪ್ಪ ಜಗದಾಳ, ಪರಪ್ಪ ಮಟಗಾರ, ಶಂಕರ ಗೋಶಿ, ಭೀಮಶಪ್ಪ ಖಾನಾಪೂರ, ಪಂಚಾಕ್ಷರಿ ಹೆಬ್ಬಾಳ, ಹಣಮಂತ ಸಂಗಟ, ಭಗವಂತ ಪತ್ತಾರ, ಧರೆಪ್ಪ ಖಾನಗೌಡ್ರ, ನವರಾತ್ರಿ ಉತ್ಸವ ಕಮಿಟಿಯ ಸದಸ್ಯರು,ದೇವಸ್ಥಾನದ ಅರ್ಚಕರು ಹಾಗೂ ಕಮಿಟಿಯ ಸದಸ್ಯರು, ಕಲ್ಲೋಳಿ ಪಟ್ಟಣದ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮೇರವಣಿಗೆಯಲ್ಲಿ ಭಾಗವಹಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ

    August 3, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    ತುಮಕೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 560 ಭೂಮಾಪಕರ ಹುದ್ದೆಗಳಿಗೆ, ಅರ್ಜಿಹಾಕಲು ಆ.7 ಅಂತಿಮ ದಿನಾಂಕ ನಿಗದಿಪಡಿಸಿದೆ, ಕರ್ನಾಟಕ ವಿಶೇಷ…

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.