ಬೆಂಗಳೂರು: ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ನರ್ಸ’ನ್ನು ಪೊಲೀಸರು ಬಂಧಿಸಿದ್ದು, ಶುಶ್ರೂಷಕಿ ಉಷಾರಾಣಿ (35) ಬಂಧಿತ ಆರೋಪಿ. ಮೈಸೂರಿನ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಷಾರಾಣಿ, ಜಾಲದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಹಾಗೂ ಚೆನ್ನೈನ ವೈದ್ಯರೊಬ್ಬರ ತಂಡದಲ್ಲಿದ್ದರು ಎನ್ನಲಾಗಿದೆ.
ಭ್ರೂಣ ಹತ್ಯೆ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದು, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರತೆಗೆದಿದ್ದೇನೆಂದು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಮಗುವನ್ನು ಹತ್ಯೆ ಮಾಡಿ ಮೆಡಿಕಲ್ ವೇಸ್ಟ್ ಗೆ ಹಾಕುತ್ತಾ ಇದ್ದರು ಎಂದು ಹೇಳಿದ್ದಾರೆ.
ಈ ನಡುವ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಈ ವೇಳೆ ಎರಡು ಪ್ರಕರಣ ಸಂಬಂಧ ಇದೂವರೆಗೆ ನಡೆದಿರುವ ತನಿಖೆ ಬಗ್ಗೆ ಮಾಹಿತಿ ಪಡೆದ ಸಿಐಡಿ ತಂಡವು, ಬಳಿಕ ಎಲ್ಲಾ ದಾಖಲೆಗಳನ್ನು ತನಿಖಾಧಿಕಾರಿಗಳಿಂದ ಸ್ವೀಕರಿಸಿ ತೆರಳಿತು.


