ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನ ಪೊಲೀಸರು ಬಂಧಿಸಿದ್ದು, ಇದೀಗ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್ ಬಾಬು, ಕೆ.ಆರ್.ನಗರದ ಶಂಕರ ಬಂಧಿತ ಆರೋಪಿಗಳಾಗಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಆರೋಪಿಗಳಾದ ಅಭಿಷೇಕ್, ವೀರೇಶ್ ಸೇರಿದಂತೆ ಒಟ್ಟು 12 ಆರೋಪಿಗಳನ್ನು ಮಂಡ್ಯ ಜಿಲ್ಲೆ ಪೊಲೀಸರು ಬಂಧಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q