ಕೋಲಾರ: ಭ್ರಷ್ಟಾಚಾರದ ಸರ್ಕಾರದ ವಿರುದ್ದ ಹೋರಾಟಕ್ಕೆ ಪ್ರಾರಂಭ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಟೀಲ್, ರೈತರ ಪರ ಯೋಜನೆಗಳನ್ನ ವಾಪಸ್ ತೆಗೆದುಕೊಳ್ಳುವಂತಹ ಕೆಲಸ ಕಾಂಗ್ರೇಸ್ ಸರ್ಕಾರ ಮಾಡಿದೆ. ಉಚಿತ ವಿದ್ಯುತ್ ಕೊಡುತ್ತೇವೆ ಎಂದು ನಿರಂತರ ವಿದ್ಯುತ್ ಕಡಿತ ಮಾಡುತ್ತಿದೆ. ರೈತರ ಹೊಟ್ಟೆಗೆ ಹೊಡೆಯುವಂತಹ ಕೆಲಸ ಮಾಡುತ್ತಿದೆ. ಕಾವೇರಿ ನೀರು ತಮಿಳುನಾಡಿಗೆ ಕಳಿಸುವ ಮೂಲಕ, ನೀವು ಕರ್ನಾಟಕದ ಮುಖ್ಯಮಂತ್ರಿಯಾ? ಅಥವಾ ತಮಿಳುನಾಡಿನ ಮುಖ್ಯಮಂತ್ರಿನಾ? ಕದ್ದು ಮುಚ್ಚಿ ನೀರನ್ನ ಬಿಡುವ ಮೂಲಕ ಕಾಂಗ್ರೇಸ್ ನ ಬುದ್ದಿ ತೋರಿಸಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇಬ್ಬರು ಮಂತ್ರಿಗಳ ಮೇಲೆ ಕೇಸ್ ದಾಖಲಾಗಿದ್ದರೂ ಅವರ ರಾಜೀನಾಮೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿಲ್ಲ. ದೂರು ನೀಡಿದವರ ಮೇಲೆ ಪ್ರಕರಣ ದಾಖಲು ಮಾಡುತ್ತಿದ್ದಾರೆ ಎಂದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ 28 ಕ್ಕೆ 28 ಗೆಲ್ಲುವಂತಹ ಕೆಲಸ ಮಾಡುತ್ತೇವೆ. ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಪ್ರವಾಸ ಮಾಡಿ ಯಶಸ್ವಿಯಾಗುತ್ತೇವೆ ಎಂದರು.


