ಬೆಂಗಳೂರು: ವಕ್ಫ್ ನೋಟಿಸ್ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನಾ ಕಾರ್ಯಕ್ರಮವು ಮನೆಯೊಂದು ಹಲವು ಬಾಗಿಲು ಎನ್ನುವಂತಾಗಿದೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣಕ್ಕೆ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಸವಾಲಾಗಿದ್ದಾರೆ.
ವಕ್ಫ್ ನೋಟಿಸ್ ವಿರುದ್ಧ ನಾಳೆಯಿಂದ ಯತ್ನಾಳ್ ನೇತೃತ್ವದಲ್ಲಿ ಜಾಗೃತಿ ಅಭಿಯಾನ ಆರಂಭವಾಗಲಿದೆ. ಇದೇ ವೇಳೆ ಯತ್ನಾಳ್ ನೇತೃತ್ವದಲ್ಲಿ ನಡೆಯಲಿರುವ ಜಾಗೃತಿ ಅಭಿಯಾನಕ್ಕೆ ಪಕ್ಷದ ಯಾವುದೇ ಶಾಸಕರು, ಸಂಸದರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಯಾರೊಬ್ಬರೂ ಪಾಲ್ಗೊಳ್ಳಬಾರದು ಎಂದು ವಿಜಯೇಂದ್ರ ಮೌಖಿಕವಾಗಿ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ವರಿಷ್ಟರ ಅನುಮತಿ ಪಡೆಯದೇ, ಪಕ್ಷದ ಚಿಹ್ನೆಯನ್ನು ಬಳಸದೆ ಒಬ್ಬ ವ್ಯಕ್ತಿಯ ಪ್ರತಿಷ್ಟೆಗಾಗಿ ನಡೆಸಲು ಮುಂದಾಗಿರುವ ಈ ಅಭಿಯಾನದಿಂದ ದೂರ ಉಳಿಯುವಂತೆ ಸೂಚನೆ ಕೊಡಲಾಗಿದೆ.
ರಾಜ್ಯದಲ್ಲಿ ಬಿಜೆಪಿ ವಕ್ಫ್ ವಿರುದ್ಧ ಹೋರಾಟ ಹಮಿಕೊಂಡರೆ, ಯತ್ನಾಳ್ ಟೀಂ ಪ್ರತ್ಯೇಕ ಹೋರಾಟ ಹಮ್ಮಿಕೊಂಡಿದೆ. ಯತ್ನಾಳ್ ಟೀಂ ಬೀದರ್ನಿಂದ ಚಾಮರಾಜನಗರದವರೆಗೆ ಹೋರಾಟ ಜಾಥಾ ಹಮಿಕೊಂಡಿದೆ.
ಈ ನಡುವೆ 3 ತಂಡವಾಗಿ ವಕ್ಫ್ ವಿರುದ್ಧ ಬಿ.ವೈ.ವಿಜಯೇಂದ್ರ ತಂಡ ಜಾಗೃತಿ ಹೋರಾಟ ಹಮ್ಮಿಕೊಂಡಿದೆ. ಒಂದೇ ವಿಚಾರವಾಗಿ ಪಕ್ಷದಲ್ಲಿ ನಡೆಯುವ ಎರಡು ತಂಡಗಳ ಹೋರಾಟ ಸಾರ್ವಜನಿಕವಾಗಿ ಪಕ್ಷಕ್ಕೆ ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296