ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಯ್ತಾ ಕಾಲೇಜ್ ಪುಂಡರ ಹಾವಳಿ ಅನ್ನೋ ಪ್ರಶ್ನೆ ಇದೀಗ ಕೇಳಿ ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಕಾಲೇಜ್ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ನ ರಂಗಮಂದಿರ ಹಿಂದೆ ಘಟನೆ.
ಮಾತಿಗೆ ಮಾತು ಬೆಳೆಸಿಕೊಂಡು ಪರಸ್ಪರ ಎರಡು ಗುಂಪುಗಳು ಹೊಡೆದಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ತುಮಕೂರು ನಗರದಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದರು. ಇದೀಗ ಗುಬ್ಬಿ ಸರ್ಕಾರಿ ಕಾಲೇಜ್ ನಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಘಟನೆಯಿಂದ ಪೋಷಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q