ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತು ಹೋರಾಟ ಶುರುವಾಗಿದೆ. ಗ್ರಾಸ್ ರೂಟ್ ಲೆವೆಲ್ ನಲ್ಲಿ ಮುಂದುವರಿಯುತ್ತೆ ಎಂದು ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಬಿಎಸ್ ವೈ ಆ ಸಂದರ್ಭದಲ್ಲಿ ರಾಜೀನಾಮೆ ಕೊಟ್ಟಿದ್ದರು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರಸ್ತುತ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಿನ್ನೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿದ್ದೇವೆ ಎಂದರು.
ಜೀವನದಾದ್ಯಂತ ನೀವು ನೈತಿಕತೆಯನ್ನ ಮಾತನಾಡಿಕೊಂಡು ಬಂದಿದ್ದೀರ. ಎನ್ ಕ್ವೈರಿ ಆಗಿ ಕ್ಲೀನ್ ಚಿಟ್ ಆದ್ಮೇಲೆ ನೀವು ಬನ್ನಿ ಎಂದು ಸಿದ್ದರಾಮಯ್ಯ ಅವರಿಗೆ ತಿಳಿಸಿದರು.
ಎನ್ ಕ್ವೇರಿ ಎಲ್ಲ ನಿಮ್ಮ ಅಂಡರ್ ನಲ್ಲೇ ನಡೆಯುವುದರಿಂದ, ರಾಜ್ಯಧರ್ಮದಂತೆ ನೀವು ರಾಜೀನಾಮೆ ನೀಡಿ, ತುರ್ತಾಗಿ ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಬೇಕು ಎಂದು ಆಗ್ರಹಿಸಿದರು.
ರಾಜಕೀಯದ ಭಂಡತನಕ್ಕೆ ನಾವು ಉತ್ತರ ಕೊಡೋಕೆ ಆಗಲ್ಲ. ಗವರ್ನರ್ ತೀರ್ಮಾನವನ್ನ ಹೈಕೋರ್ಟ್ ಎತ್ತಿ ಹಿಡಿದಿದೆ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296