ಲಕ್ನೋ : ಕಳೆದ ವಾರ ಆಚರಿಸಲಾದ ಈದ್ ನಲ್ಲಿ ಅನುಮತಿಯಿಲ್ಲದೆ ಕಾನ್ಪುರದ ಈದ್ಗಾದ ಹೊರಗೆ ರಸ್ತೆಯಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು 2,000 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಮಾಜ್ ಮಾಡುತ್ತಿರುವವ ವಿಡಿಯೋವನ್ನು ಪೊಲೀಸರು ಚಿತ್ರೀಕರಿಸಿದ್ದುಮ ಅದರ ಮಾಹಿತಿ ಆಧಾರದಲ್ಲಿ ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಏಪ್ರಿಲ್ 26 ರ ಬುಧವಾರ ಬಜಾರಿಯಾ, ಬಾಬು ಪೂರ್ವಾ ಮತ್ತು ಜಜ್ಮೌ ಎಂಬ ಮೂರು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕವಾಗಿ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಮೊಹಮ್ಮದ್ ಸುಲೇಮಾನ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಧರ್ಮದ ಆಧಾರದ ಮೇಲೆ ವ್ಯಕ್ತಿಗಳನ್ನು ಗುರಿಯಾಗಿಸಲಾಗುತ್ತಿದೆ. ಅನೇಕರು ಈದ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂಬ ಪೊಲೀಸರ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಆವರಣದಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಕೆಲವರು ಮಾತ್ರ ಹೊರಗಡೆಯೇ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


