ಚಿತ್ರರಂಗದ ಬೇಡಿಕೆಯಂತೆಯೇ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
ಈ ಹಿಂದಿನ ಸರ್ಕಾರದಲ್ಲಿ ಈ ಫಿಲ್ಮ್ ಸಿಟಿಯನ್ನು ಬೆಂಗಳೂರಿಗೆ ವರ್ಗಾಯಿಸುವ ಉದ್ದೇಶ ಹೊಂದಿತು. ಇದೀಗ ಮತ್ತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದಾರೆ.
ಇದರ ಜೊತೆಗೆ ಕನ್ನಡ ಚಿತ್ರರಂಗದ ಇತಿಹಾಸ, ಅದು ಬೆಳೆದು ಬಂದ ಇತಿಹಾಸ ತಿಳಿಸುವ ಸಂಗ್ರಹಾಯಲವನ್ನು ಬೆಂಗಳೂರಿನ ಕಂಠೀರವದಲ್ಲಿರುವ ಡಾ ರಾಜ್ ಕುಮಾರ್ ಸ್ಮಾರಕದ ಬಳಿ ನಿರ್ಮಾಣ ಮಾಡುಲಾಗುವುದು. ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆ ಈ ಯೋಜನೆಗೆ ಆಯ್ಕೆ ಸಮಿತಿ ರಚಿಸಿ ಮತ್ತು ಸಹಾಯ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


