2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು. ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.
2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕವನ್ನು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಂಡಿಸಿದರು. ಕಾನೂನು ಸಚಿವ ಎಚ್. ಕೆ. ಪಾಟೀಲ್ ಪರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, 2023ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರವಾಗಿ 2023ನೇ ಸಾಲಿನ ಕರ್ನಾಟಕ ಅಗ್ನಿಶಾಮಕ ತಿದ್ದುಪಡಿ ವಿಧೇಯಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರವಾಗಿ 2023ನೇ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕವನ್ನು ಪ್ರಿಯಾಂಕ್ ಖರ್ಗೆ ಮಂಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


