BMTC ಕಮರ್ಷಿಯಲ್ ವಿಭಾಗದಲ್ಲಿ ಕೋಟ್ಯಂತರ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬಿಎಂಟಿಸಿಯ 7 ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
ಅಸಿಸ್ಟೆಂಟ್ ಸೆಕ್ಯುರಿಟಿ ಆ್ಯಂಡ್ ವಿಜಿಲೆನ್ಸ್ ಆಫೀಸರ್ ಸಿ.ಕೆ.ರಮ್ಯಾ ಅವರು ದೂರು ದಾಖಲಿಸಿದ್ದಾರೆ. ಆರೋಪಿಗಳು ಬಿಎಂಟಿಸಿಯ ಹಿಂದಿನ ಎಂಡಿ ಶಿಖಾ ಹಾಗೂ ನಿರ್ದೇಶಕ ಕೆ.ಅರುಣ್ ಸಹಿ ಕಲರ್ ಜೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆ ಸೃಷ್ಟಿಸಿದ್ದರು. ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿ 7 ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.


