ಬಿಗ್ ಬಾಸ್ ಒಟಿಟಿ ವಿನ್ನರ್ ಎಲ್ವಿಶ್ ಯಾದವ್ ವಿರುದ್ಧ ಅಕ್ರಮವಾಗಿ ಹಣ ಸಾಗಾಣಿಕೆ ವಿಚಾರವಾಗಿ, ಜಾರಿ ನಿರ್ದೇಶನಾಲಯವು ಕೇಸ್ ದಾಖಲಿಸಿದೆ. ಅಕ್ರಮ ಹಣ ವರ್ಗಾವಣೆ ಕುರಿತಂತೆ ಉತ್ತರ ಪ್ರದೇಶದ ಗೌತಮ್ ಬುದ್ಧನಗರ ಜಿಲ್ಲೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ದಾಖಲಾದ ಎಫ್.ಐ.ಆರ್ ಮತ್ತು ಜಾರ್ಜ್ ಶೀಟ್ ಗಳ ಆಧಾರದಲ್ಲಿ ಇಡಿ ಪ್ರಕರಣವನ್ನು ದಾಖಲಿಸಿಕೊಂಡಿದೆ. ಈ ಹಿಂದೆ ಎಲ್ವಿಶ್ ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು.
ರೇವ್ ಪಾರ್ಟಿಗಳಲ್ಲಿ ಹಾವಿನ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಪೊಲೀಸರು ಸಲ್ಲಿಸಿದ್ದ ಜಾರ್ಜ್ ಶೀಟ್ ನಲ್ಲಿ ಅಕ್ರಮ ಹಣದ ಕುರಿತಂತೆ ಉಲ್ಲೇಖವಾಗಿತ್ತು. ಹಾಗಾಗಿ ಈ ಪ್ರಕರಣಕ್ಕೆ ಇಡಿ ಎಂಟ್ರಿ ಕೊಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296