ಮಂಗಳೂರು: 47 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು ದಾಖಲಿಸಿದ್ದಾರೆ.
2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ದೌರ್ಜನ್ಯದ ಫೋಟೋ, ಸೆಲ್ಫಿ ವೀಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಸಹ ಆರೋಪಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 417, 354ಎ, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q