ಬೆಂಗಳೂರು: ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರದ ನಿವಾಸಿ ಸೋಮಶೇಖರ್ ಅಲಿಯಾಸ್ ಜಿಮ್ ಸೋಮನ ವಿರುದ್ಧ ಕೇಸ್ ದಾಖಲಾಗಿದೆ. ಸದ್ಯ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಫ್ಲ್ಯಾಟ್ವೊಂದಕ್ಕೆ ಕರೆದೊಯ್ದು ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 26 ವರ್ಷದ ಯುವತಿ ದೂರು ನೀಡಿದ್ದಾರೆ.
ಸಂತ್ರಸ್ತೆಗೆ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ಸೋಮಶೇಖರ್ ಬಳಿ 6 ಲಕ್ಷ ಆರ್ಥಿಕ ಸಹಾಯ ಕೇಳಿದ್ದಳು. 2024ರ ಅಕ್ಟೋಬರ್ ನಲ್ಲಿ ಸಂತ್ರಸ್ತೆ ಪಿ.ಜಿ ಬಳಿ ತೆರಳಿದ್ದ ಸೋಮಶೇಖರ್, ಹಣ ಕೊಡುವುದಾಗಿ ಆಕೆಯನ್ನು ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ಇರುವ ತಮ್ಮ ಫ್ಲ್ಯಾಟ್ ವೊಂದಕ್ಕೆ ಕರೆದೊಯ್ದಿದ್ದರು. ಅಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx