ತುಮಕೂರು: ಜೀನಿ ಕಂಪನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಜೀನಿ ಕಂಪನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಎಫ್ ಐಆರ್. ದಾಖಲಾಗಿದೆ.
ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕಿರುಕುಳ ನೀಡಿರೋ ಆರೋಪ ಕೇಳಿ ಬಂದಿದೆ.
ಕಳೆದ 10 ತಿಂಗಳಿಂದ ಸಂತ್ರಸ್ತ ಯುವತಿ ಜೀನಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಳು. ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಖಾಸಗಿ ಅಂಗಾಂಗಗಳನ್ನ ಮುಟ್ಟಿ ಲೈಂಗಿಕ ಕಿರುಕುಳ ನೀಡಿ, ಇದರ ಬಗ್ಗೆ ಯಾರಿಗಾದರು ವಿಚಾರ ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿರುವುದಾಗಿ ಜೀನಿ ಕಂಪನಿಯ ಮಾಲೀಕನ ವಿರುದ್ಧ ದೂರು ನೀಡಿದ ಯುವತಿ ಆರೋಪಿಸಿದ್ದಾಳೆ.
ಸಂತ್ರಸ್ತ ಯುವತಿ ಕೊಟ್ಟ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಿಕೊಂಡ ಕಳ್ಳಂಬೆಳ್ಳ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW