nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು
    ರಾಜ್ಯ ಸುದ್ದಿ January 29, 2026

    ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು

    By adminJanuary 29, 2026No Comments2 Mins Read
    mayur patel

    ಬೆಂಗಳೂರು: ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ಅವರು ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ನಗರದಲ್ಲಿ ಸರಣಿ ಅಪಘಾತ ಎಸಗಿದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಈ ಸಂಬಂಧ ಹಲಸೂರು ಸಂಚಾರಿ ಪೊಲೀಸರು ನಟನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಘಟನೆಯ ವಿವರ: ಹಿರಿಯ ನಟ ಮದನ್ ಪಟೇಲ್ ಅವರ ಪುತ್ರ ಮಯೂರ್ ಪಟೇಲ್ ಅವರು ಬುಧವಾರ ರಾತ್ರಿ ತಮ್ಮ ಟೊಯೊಟಾ ಫಾರ್ಚೂನರ್ ಕಾರಿನಲ್ಲಿ ದೊಮ್ಮಲೂರು ರಸ್ತೆಯಾಗಿ ಸಂಚರಿಸುತ್ತಿದ್ದರು. ಈ ವೇಳೆ ಅತಿಯಾದ ವೇಗ ಮತ್ತು ಮದ್ಯದ ಅಮಲಿನಲ್ಲಿದ್ದ ಅವರು ಕಾರಿನ ಮೇಲಿನ ನಿಯಂತ್ರಣ ಕಳೆದುಕೊಂಡು, ರಸ್ತೆ ಬದಿ ನಿಂತಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ.


    Provided by
    Provided by

    ಈ ಸರಣಿ ಅಪಘಾತದಲ್ಲಿ ಶ್ರೀನಿವಾಸ್ ಮತ್ತು ಅಭಿಷೇಕ್ ಎಂಬುವವರಿಗೆ ಸೇರಿದ ವಾಹನಗಳು ಸೇರಿದಂತೆ ಒಂದು ಸರ್ಕಾರಿ ವಾಹನಕ್ಕೂ ಭಾರೀ ಹಾನಿಯಾಗಿದೆ. ಅಪಘಾತದ ತೀವ್ರತೆಗೆ ಸ್ಥಳೀಯರು ಮತ್ತು ಪಾದಚಾರಿಗಳು ಆತಂಕಗೊಂಡಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಗಸ್ತು ಪಡೆಯು ನಟ ಮಯೂರ್ ಪಟೇಲ್ ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದೆ. ಪರೀಕ್ಷೆಯಲ್ಲಿ ಅವರು ಕಾನೂನು ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಸಂತ್ರಸ್ತ ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಪೊಲೀಸರು ಅಜಾಗರೂಕ ಚಾಲನೆ ಮತ್ತು ಮದ್ಯಪಾನ ಮಾಡಿ ಚಾಲನೆ ಮಾಡಿದ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದಾರೆ.

    ತನಿಖೆಯ ವೇಳೆ ನಟ ಚಲಾಯಿಸುತ್ತಿದ್ದ ಐಷಾರಾಮಿ ಎಸ್‌ ಯುವಿ ಕಾರಿಗೆ ವಿಮೆ (Insurance) ಇಲ್ಲದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಅವರ ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

    ವೈರಲ್ ವಿಡಿಯೋ: ಅಪಘಾತದ ಬಳಿಕ ನಟ ಕಾರಿನಿಂದ ಇಳಿದು ಜನರೊಂದಿಗೆ ಮಾತನಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಅವರು, “ಎಷ್ಟೇ ನಷ್ಟವಾಗಿದ್ದರೂ ನಾನು ಅದನ್ನು ಸರಿಪಡಿಸಿಕೊಡುತ್ತೇನೆ” ಎಂದು ಹೇಳುತ್ತಿರುವುದು ಕಂಡುಬಂದಿದೆ.

    ‘ಉಡೀಸ್’, ‘ಮಣಿ’, ‘ಗುನ್ನಾ’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಮಯೂರ್ ಪಟೇಲ್, ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.