ಅರಣ್ಯ ಭೂಮಿಯನ್ನು ಪರಿವರ್ತನೆ ಮಾಡಿದ ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಇದೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.
ಅಕ್ಟೋಬರ್ 17 ರಂದು ಸಹಾಯಕ ಕಮಿಷನರ್ (ಎಸಿ) ಎಂ. ಜಿ. ಶಿವಣ್ಣ
ಮತ್ತು ತಹಶೀಲ್ದಾರ್ ಅಜಿತ್ ಕುಮಾರ್ ರೈ ವಿರುದ್ಧ ಅರಣ್ಯಾಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆಂದು ತಿಳಿದುಬಂದಿದೆ.
ಕೊತ್ತನೂರು ಗ್ರಾಮದಲ್ಲಿ 500 ಕೋಟಿ ಮೌಲ್ಯದ 17. 34 ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಮಾರ್ಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.


