ಫೆಬ್ರವರಿ 17ರಂದು ಬೆಳಿಗ್ಗೆ 10:15ಕ್ಕೆ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಿಸಿದರು.
ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಇದೇ ಶುಕ್ರವಾರ ಬೆಳಗ್ಗೆ 10:15 ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ .
ಸುಮಾರು ಒಂದು ಗಂಟೆ ಕಾಲ ಬಜೆಟ್ ಭಾಷಣ ಇರಲಿದೆ. ಬಳಿಕ ಫೆಬ್ರುವರಿ 20ರಿಂದ 22ರವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. ಫೆಬ್ರುವರಿ 22ರಂದು ಸರ್ಕಾರದಿಂದ ಉತ್ತರ ಬರಲಿದೆ ಎಂದು ತಿಳಿಸಿದರು.
ಈಗಾಗಲೇ ಬಜೆಟ್ ಅಧಿವೇಶನ ಫೆಬ್ರುವರಿ 10ರಂದು ಆರಂಭವಾಗಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತಿದೆ.ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇದು ಕೊನೆಯ ಬಜೆಟ್ ಆಗಿದೆ. ಏಪ್ರಿಲ್–ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಈ ಬಾರಿ ಬಜೆಟ್ ಮೇಲೆ ಕುತೂಹಲವಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


