ಬೆಂಗಳೂರು: ಚಾಮರಾಜಪೇಟೆಯ ಟಿಆರ್ ಮೀಲ್ ಬಳಿ ಟೈಯರ್ ಅಂಗಡಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಗೋಡೌನ್ ನಲ್ಲಿ ಯಾರೂ ಇರಲಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.
ಮುಂಜಾನೆ 4:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ತಗಲಿರೋ ಕಟ್ಟಡದಲ್ಲಿ ಸುಮಾರು 8 ಟಯರ್ ಅಂಗಡಿಗಳು ಇದ್ದು, ಎಲ್ಲವೂ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296