ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಗ್ನಿ ಅವಘಡದಲ್ಲಿ ಐದು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, ಪೂಟ್ ವೇರ್ ಹಾಗೂ ಹೋಟೆಲ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಏಕಾಏಕಿ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ತಿಳಿದು ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದೆ.
ಘಟನೆಯಿಂದಾಗಿ 30 ಲಕ್ಷಕ್ಕೂ ಅಧಿಕ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ್ ಭೇಟಿ ನೀಡಿದ್ದಾರೆ. ಹಂಸಭಾವಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


