ಔರಾದ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ವೆಂಕಟೇಶ್ವರ ಆಟೋ ಮೊಬೈಲ್ಸ್ ಅಂಗಡಿಗೆ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಔರಾದ ತಾಲೂಕಿನ ವಡಗಾಂವ ಗ್ರಾಮದಲ್ಲಿ ನಡೆದಿದೆ.
ಬಾಲಾಜಿ ಪಾಟೀಲ ಎನ್ನುವವರಿಗೆ ಸೇರಿದ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ರಾತ್ರಿ ಸುಮಾರು ಎಂಟು ಗಂಟೆಗೆ ಆಟೋ ಮೊಬೈಲ್ಸ್ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಅಂಗಡಿಯ ಮಾಲಿಕರು ತಿಳಿಸಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ. ಈ ಅವಘಡದಿಂದ ಸುಮಾರು ಎಂಟು ಲಕ್ಷಕ್ಕಿಂತ ಅಧಿಕ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.
ವಿಷಯ ತಿಳಿದು ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಅವರು ಸ್ಥಳಕ್ಕೆ ಭೇಟಿ ನೀಡಿ, ಅಂಗಡಿಯ ಮಾಲಿಕರಿಗೆ ಧೈರ್ಯ ತುಂಬಿ ,ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಮಾತನಾಡಿ, ಸೂಕ್ತ ಪರಿಹಾರ ಒದಗಿಸಿ ಕೊಡುವಂತೆ ಮನವಿ ಮಾಡಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx