ಬೆಂಗಳೂರು: ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ.
ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿದ್ದು, ವಿಷಯ ತಿಳಿದು ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಗೋದಾಮಿನಲ್ಲಿ ಎರಡು ಸಿಲಿಂಡರ್ ಗಳು ಸ್ಫೋಟಗೊಂಡು ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಅಗ್ನಿ ಅವಘಡದಲ್ಲಿ ಗಾಯೊಂಡಿರುವ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.


