ನವದೆಹಲಿ: ಗುರುವಾರ ತಡರಾತ್ರಿ ಪೇಂಟ್ ತಯಾರಿಕಾ ಕಾರ್ಖಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿಯ ಆಲಿಪುರದ ದಯಾಲ್ಪುರದಲ್ಲಿ ನಡೆದಿದೆ.
ಕಾರ್ಖಾನೆಯಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಿಂದ ಬೆಂಕಿ ಹೊತ್ತಿಕೊಂಡಿದ್ದು ಸ್ಫೋಟದಿಂದಾಗಿ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಅವಘಡದಲ್ಲಿಸುಟ್ಟು ಕರಕಲಾದ 11 ಮೃತದೇಹಗಳನ್ನು ಹೊರತೆಗೆಯಲಾಗಿದೆ., ಇನ್ನೂ ಕೆಲವರು ನಾಪತ್ತೆಯಾಗಿರುವ ಸಾಧ್ಯತೆ ಇದೆ. ಹಾಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಸಿಬ್ಬಂದಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನುಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.