ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನ ಎಂಜಿನ್ ಹೊತ್ತಿ ಉರಿದ ಘಟನೆ ಹಲಸೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಜರುಗಿದೆ.
ವೇಗವಾಗಿ ಬರುತ್ತಿದ್ದಾಗ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಕಾರಿನಿಂದ ಚಾಲಕ ಹೊರ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಆಗಿಲ್ಲ. ಘಟನಾ ಸ್ಥಳಕ್ಕೆ ಹಲಸೂರ್ ಗೇಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸ್ಥಳೀಯರ ಸಹಾಯದಿಂದ ಪೊಲೀಸರು ಬೆಂಕಿ ನಂದಿಸಿದ್ದಾರೆ.


