ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಗಾಯಗೊಂಡು ಮಿಂಟೋ ನೇತ್ರ ಆಸ್ಪತ್ರೆಗೆ ಸೋಮವಾರ 16 ಜನರು ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ 4 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡ ಮೂವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ದೀಪಾವಳಿ ಹಬ್ಬದ ದಿನದ ರಾತ್ರಿ ಮತ್ತು ಮರುದಿನ ಆರು ಮಕ್ಕಳು, 10 ಮಂದಿ ವಯಸ್ಕರು ಸೇರಿದಂತೆ 16 ಪ್ರಕರಣಗಳಿಗೆ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದಾರೆ. ಕೆಲವರಿಗೆ ಹೊಲಿಗೆ ಹಾಕುವ ಅಗತ್ಯವಾಗಿತ್ತು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. 12 ವರ್ಷದ ಬಾಲಕನ ಕಣ್ಣಿನ ಕಾರ್ನಿಯ ಸಂಪೂರ್ಣವಾಗಿ ಹಾನಿಗೊಳಾಗಿದ್ದು, ಆಂತರಿಕ ರಕ್ತಸ್ರಾವವಾಗಿತ್ತು. ದೇವಾಲಯದ ಬಳಿ ನಡೆದು ಹೋಗುತ್ತಿದ್ದ 34 ವರ್ಷದ ವ್ಯಕ್ತಿಯ ಕಣ್ಣಿಗೆ ತೀವ್ರ ಗಾಯವಾಗಿದ್ದು, ಅವರನ್ನು ನಿಕಟ ವೀಕ್ಷಣೆಯಲ್ಲಿ ಇರಿಸಲಾಗಿದೆ.
ಈ ಗಾಯಗಳಿಗೆ ಕಾರ್ನಿಯಲ್ ಹೊಲಿಗೆ ಮತ್ತು ಇತರ ವಿಧಾನಗಳ ಮೂಲಕ ಚಿಕಿತ್ಸೆ ನೀಡಬೇಕಾಗಿದೆ, ಆದರೆ ಇಷ್ಟೆಲ್ಲಾ ಮಾಡಿದ ನಂತರವೂ, ದೃಷ್ಟಿ ಮರಳಿ ಪಡೆಯುವ ಸಾಧ್ಯತೆಗಳು ತುಂಬಾ ಕಡಿಮೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC