ಬರೇಲಿ: ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬರೇಲಿಯ ಸಿರೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಕಾರ್ಖಾನೆಯ ಮಾಲೀಕ ನಾಸಿರ್ ಎಂದು ತಿಳಿದು ಬಂದಿದೆ. ಆದ್ರೆ ಅವರು ಬೇರೆ ಸ್ಥಳಕ್ಕೆ ಪರವಾನಗಿ ಹೊಂದಿದ್ದರು. ಆದರೆ ಘಟನೆ ನಡೆದ ಸ್ಥಳ ನಾಸಿರ್ ಅವರ ಅತ್ತೆಗೆ ಸೇರಿದ್ದಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ಹಿನ್ನೆಲೆಯಲ್ಲಿ, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರು ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ, ಸ್ಥಳೀಯ ಸ್ಟೇಷನ್ ಠಾಣೆಯ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ ಮತ್ತು ಸರ್ಕಲ್ ಇನ್ಸ್ ಪೆಕ್ಟರ್ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296