ಬೆಂಗಳೂರು: ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದರಿಂದ ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೇರಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದ ದಿನೇಶ್ ಎಂಬಾತ ಮೃತಪಟ್ಟಿದ್ದಾನೆ. ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರಿಂದ ಯುವಕ ಕೊನೆಯುಸಿರೆಳೆದಿದ್ದಾನೆ.


