ಉತ್ತರ ಪ್ರದೇಶ: ಎಲೆಕ್ಟ್ರಿಕಲ್ ಬೋರ್ಡ್‌ನಿಂದ ಬೆಂಕಿ ಹೊತ್ತಿಕೊಂಡು ಪಟಾಕಿ ಮತ್ತು ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಭೀಕರ ಅಗ್ನಿ ಅನಾಹುತ ನೋಯ್ಡಾದ ಸೆಕ್ಟರ್ 27 ರಲ್ಲಿ ನಡೆದಿದೆ.
ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಆದರೆ ಇಡೀ ಮಹಡಿ ಸುಟ್ಟುಹೋಗಿದೆ.
ನೋಯ್ಡಾದ ಸೆಕ್ಟರ್ 27ರಲ್ಲಿ ಶುಕ್ರವಾರ ರಾತ್ರಿ ಮನೆಯೊಂದರಲ್ಲಿ ತೀವ್ರ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಎರಡನೇ ಮಹಡಿಯಲ್ಲಿ ಸಿಲುಕಿದ್ದ ಶ್ವೇತಾ ಸಿಂಗ್ ಸಾವನ್ನಪ್ಪಿದ್ದಾರೆ. ಆಕೆಯ ಸೋದರ ಸಂಬಂಧಿ ನಮ್ರತಾ ಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದೆ.
ಪೊಲೀಸರ ಪ್ರಕಾರ, ಮೊದಲಿಗೆ ಬೆಂಕಿಯು ವಿದ್ಯುತ್ ಬೋರ್ಡ್‌ನಲ್ಲಿ ಪ್ರಾರಂಭವಾಯಿತು. ಮನೆಯಲ್ಲಿ ಶೇಖರಿಸಿಟ್ಟಿದ್ದ ಪಟಾಕಿಗಳು ಹೊತ್ತಿಕೊಂಡಾಗ ಅದು ಬೇಗನೆ ಹರಡಿ, ಬೆಂಕಿಯ ಜ್ವಾಲೆಯು ತೀವ್ರಗೊಂಡು ಇಡೀ ಮನೆಗೆ ಆವರಿಸಿದೆ. ಹೊಗೆಯಿಂದಾಗಿ ಎರಡನೇ ಮಹಡಿಯಲ್ಲಿ ವಾಸಿಸುತ್ತಿದ್ದ ಇಬ್ಬರು ಮಹಿಳೆಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296