ಪಟ್ನಾ: ವಿಚಾರಣೆಗೆಂದು ಕೈದಿಗಳನ್ನು ಕರೆದುಕೊಂಡು ಬರುತ್ತಿರುವಾಗ, ಪೊಲೀಸರ ಮುಂದೆಯೇ ಬಿಹಾರದ ದಾನಪುರ ಕೋರ್ಟ್ ನ ಬಳಿ ಅಪರಿಚಿತ ವ್ಯಕ್ತಿಗಳು, ಇಬ್ಬರು ಕೈದಿಗಳ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ.
ಈ ಗುಂಡಿನ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದರೆ ಮತ್ತೊಬ್ಬ ಕೈದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಕೈದಿಯನ್ನು ಆಸ್ಪತ್ರೆ ಕರೆದುಕೊಂಡು ಹೋಗಲಾಗಿದೆ.
ಬಲಿಯಾದ ಕೈದಿಯನ್ನು ಅಭಿಷೇಕ್ ಕುಮಾರ್ ಅಕಾ ಚೋಟೆ ಸರ್ಕಾರ್ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಭಿಷೇಕ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ಗುಂಡಿನ ದಾಳಿ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಭಿಷೇಕ್ ಕುಮಾರ್ ಅಕಾ ಚೋಟೆ ಸರ್ಕಾರ್ ಮೇಲೆ ಇಬ್ಬರು ವ್ಯಕ್ತಿಗಳು ದಾನಪುರ ನ್ಯಾಯಾಲಯದಲ್ಲಿ ಗುಂಡು ಹಾರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ದಾಳಿಯಲ್ಲಿ ಅಭಿಷೇಕ್ ಕುಮಾರ್ ಮೃತಪಟ್ಟಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪಾಟ್ನಾ ಸಿಟಿ ಎಸ್ಪಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.


