ಶ್ರೀನಗರ: ಉಗ್ರರ ಗುಂಡಿನ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಬ್ದುಲ್ ರಜಾಕ್ ಉಗ್ರರ ಗುಂಡಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ರಜಾಕ್ ಕೊನೆಯುಸಿರೆಳೆದಿದ್ದಾರೆ.
ಥಾನಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾ ಟಾಪ್ ಎಂಬ ಹಳ್ಳಿಯ ಮಸೀದಿಯಲ್ಲಿ ಸಂಜೆಯ ನಮಾಜ್ ಮುಗಿಸಿ ಹೊರಗೆ ಬಂದಾಗ ಅಬ್ದುಲ್ ರಜಾಕ್ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಭಯೋತ್ಪಾದಕರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ರಜಾಕ್ ನ ಸಹೋದರ ಟೆರಿಟೋರಿಯಲ್ ಆರ್ಮಿಯಲ್ಲಿ ಸೈನಿಕರಾಗಿದ್ದಾರೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296