ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಇಬ್ಬರು ಆರೋಪಿಗಳಾದ ಶಿವು ಚಂದ್ರಶೇಖರ್ ಯುವಕನನ್ನು ಗೋನಕೊಪ್ಪದ ಬಳಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಹತ್ಯೆಯಾದ ಕೆಲ ಗಂಟೆಗಳಲ್ಲೇ ಅಶೋಕ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳು ಉಳಿದ ಆರೋಪಿಗಳನ್ನು ತೋರಿಸುವುದಾಗಿ ಹೇಳಿ ಪೊಲೀಸರನ್ನು ಕರೆದೊಯ್ದಿದ್ದಾರೆ. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ.
ಈ ವೇಳೆ ಇಬ್ಬರ ಕಾಲಿಗೂ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ಆರೋಪಿಗಳನ್ನು ಕಿಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


