ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಅರೆಸ್ಟ್ ಮಾಡಲಾಗಿದ್ದು, ಎಸ್ ಐಟಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್ ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದಿದ್ದರು. ಬಂಧಿತರಲ್ಲಿ ಪ್ರಶಾಂತ್ ಬಾಬು ಸೈಬರ್ ಇನ್ಸ್ ಪೆಕ್ಟರ್ ಆಗಿದ್ದು, ಸಂತೋಷ್ ಸೈಬರ್ ಸೆಂಟರ್ ವ್ಯಕ್ತಿ ಆಗಿದ್ದ.
ಲಕ್ಷ್ಮೀಕಾಂತ್ ಇನ್ಸ್ ಪೆಕ್ಟರ್, ಶ್ರೀಧರ್ ಪೂಜಾರಿ ಡಿವೈಎಸ್ ಪಿ, ಚಂದ್ರಾದರ ಇನ್ಸ್ ಪೆಕ್ಟರ್ ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರ್ ಆಗುವಂತೆ ಸೂಚನೆ ನೀಡಲಾಗಿದೆ.


