ತುಮಕೂರು: ವಿಶ್ವವಿದ್ಯಾನಿಲಯದ ಸಿರಾ ಸ್ನಾತಕೋತ್ತರ ಕೇಂದ್ರದಲ್ಲಿ 2026-27ನೇ ಸಾಲಿನ ಪ್ರಥಮ ಬಿ.ಸಿ.ಎ ಪದವಿಗಳಿಗೆ ಪ್ರವೇಶ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಆನ್ ಲೈನ್ tumkuruniversity.ac.in ನಲ್ಲಿ ಮೇ 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸಲ್ಲಿಸಿದ ಅರ್ಜಿ ಪ್ರತಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಇತ್ತೀಚಿನ ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ ಲಗತ್ತಿಸಿ ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿಗೆ ಸಲ್ಲಿಸಬೇಕು.
ಬಿ.ಸಿ.ಎ. ಮೊದಲನೇ ಸುತ್ತಿನ ಕೌನ್ಸಿಲಿಂಗ್ ಮೇ 25ರಂದು ನಡೆಯಲಿದ್ದು, ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಕೌನ್ಸಿಲಿಂಗ್ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ucst.ac.in ಗೆ ಭೇಟಿ ನೀಡಬಹುದಾಗಿದೆ ಎಂದು ಸಿರಾ ಸ್ನಾತಕೋತ್ತರ ಕೇಂದ್ರದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


