ತುಮಕೂರಿನಲ್ಲಿ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಧುಗಿರಿ ಮೂಲದ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ರಿಪೋರ್ಟ್ ಬಂದಿದೆ.
ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೃದಯರೋಗ ಸಂಬಂಧ ಜಯದೇವ ಆಸ್ಪತ್ರೆಗೆ ವ್ಯಕ್ತಿ ಹೋಗಿದ್ದರು. ಅಲ್ಲಿ ಕೊವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ.
ಕೊವಿಡ್ ಪತ್ತೆ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕಿತರ ಕುಟುಂಬಸ್ಥರಿಗೆ ಜಿಲ್ಲಾ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆ ನಡೆಸಿದೆ.
ಸೋಂಕಿತ ಸಂಪರ್ಕಕ್ಕೆ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ ಎಂದು ಡಿಎಚ್ ಒ ಮಂಜುನಾಥ್ ಮಾಹಿತಿ ನೀಡಿದ್ದಾರೆ.