ಬೆಳಗಾವಿ: ಬೆಳಗಾವಿಯಲ್ಲಿ ಕೊವಿಡ್ ಗೆ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧ ಮೃತಪಟ್ಟಿದ್ದಾರೆ.
ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ ಮೃತಪಟ್ಟವರಾಗಿದ್ದು, ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆ ಅಂತಾ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ.
ಕೊವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಎಂದು ಗೊತ್ತಾದ ತಕ್ಷಣವೇ ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದ ಕಾರಣ 70 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಕೊವಿಡ್ ನಿಯಮಾವಳಿ ಪ್ರಕಾರವೇ ರಾತ್ರಿಯೇ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೆರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW