ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ರಾಷ್ಟ್ರ ಮಟ್ಟದ ಪುರುಷರ, ಮಹಿಳೆಯರ ಕಿರಿಯ ವಿಭಾಗದ 19 ವರ್ಷದೊಳಗಿನ ಡಾಡ್ಜ್ ಬಾಲ್ ಪಂದ್ಯಾವಳಿಯಲ್ಲಿ SBG VIDYALAYA ಮತ್ತು PU COLLEGE ನ ವಿದ್ಯಾರ್ಥಿಗಳಾದ ಅಭಿಷೇಕ್ ,ಕೇಶವ ಮತ್ತು ಮಹಿಳೆಯರ ವಿಭಾಗದಲ್ಲಿ ಮಾನಸ( ಕರ್ನಾಟಕ ತಂಡದ ನಾಯಕಿ) ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವುದರ ಮೂಲಕ ಪ್ರಥಮ ಸ್ಥಾನ ವನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಮೊದಲ ರಾಜ್ಯ ಮಟ್ಟದ ಕಿರಿಯರ DODGEBALL ಪಂದ್ಯಾವಳಿಯಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಮಾಯಸಂದ್ರ ಶಾಖೆಯ ತುಮಕೂರು ಜಿಲ್ಲೆಯ SBG ವಿದ್ಯಾಲಯದ ಬಾಲಕಿಯಯರ ತಂಡ ಪ್ರಥಮ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನ ವನ್ನು ಪಡೆದು ಜಿಲ್ಲೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಮತ್ತು ದೈಹಿಕ ಶಿಕ್ಷಕರುಗಳಾದ C.P.ಉದಯ್ ಕುಮರ್, ಗಿರಿಧರ್ & ಶಂಕರ್’ರವರಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಅಭಿನಂದಿಸಿದರು.
ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB